ಕರಾವಳಿ
ಕಲ್ಯಾಣಪುರ ಕಾಲೇಜಿನ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

Views: 5
ಉಡುಪಿ, ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಅಫ್ಕಾರ್ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ
ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದ ಅಫ್ಕಾರ್ ಸ್ಟೂಡೆಂಟ್ ಇಸ್ಲಾಮಿಕ್ ಅರ್ಗನೈಸೇಶನ್ ಆಫ್ ಇಂಡಿಯಾ ಇದರ ಸಕ್ರೀಯ ಸದಸ್ಯನಾಗಿದ್ದ. ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿ ಅಫ್ಕಾರ್‌ಗೆ ಇತ್ತೀಚಿಗೆ ಆರೋಗ್ಯದಲ್ಲಿ ಏರುಪೇರಾಗಿತ್ತು.
ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ ಅಫ್ಕಾರ್ , ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದ. ಊರಿಗೆ ಹಿಂದಿರುಗಿದ ಸಂದರ್ಭ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ರವಾಸಿದ್ದಾರೆ. ಆದರೆ ದುರಾದೃಷ್ಟವಶಾತ್ ಅಫ್ಕಾರ್ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ.