ಕರಾವಳಿ
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು

Views: 86
ಕನ್ನಡ ಕರಾವಳಿ ಸುದ್ದಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ
ಈ ಹಿಂದೆ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ ಶ್ರಂದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.