ಇತರೆ

ಕಳ್ಳತನಕ್ಕೆ ಬಂದವನಿಗೆ ಏನೂ ಸಿಗದೆ ಮನೆಯೊಡತಿಗೆ ಮುತ್ತು ಕೊಟ್ಟು ಪರಾರಿಯಾದ ಕಳ್ಳ!

Views: 470

ಕನ್ನಡ ಕರಾವಳಿ ಸುದ್ದಿ: ಕಳ್ಳತನ ಮಾಡಲು ಮನೆಯೊಂದಕ್ಕೆ ನುಗ್ಗಿದ ಕಳ್ಳನಿಗೆ ಬೆಳೆಬಾಳುವ ವಸ್ತುಗಳು ಸಿಗದಿದ್ದಾಗ ಮನೆಯಲ್ಲಿದ್ದ ಮಹಿಳೆಗೆ ಮುತ್ತು ಕೊಟ್ಟು ಪರಾರಿಯಾದ ಘಟನೆ ಮುಂಬೈನ ಹೊರವಲಯದ ಮಲಾಡ್ ಎಂಬಲ್ಲಿ ನಡೆದಿದೆ.

ಕಳೆದ ಜನೆವರಿ 3 ರಂದು ಈ ಘಟನೆ ನಡೆದಿದ್ದು, ಜ. 6 ರಂದು ಆರೋಪಿ ಪತ್ತೆಯಾಗಿದ್ದಾನೆ. ಇದರಿಂದ ಆಘಾತಕ್ಕೆ ಒಳಗಾದ ಮಹಿಳೆ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ಕೃತ್ಯದ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ, ಕಿರುಕುಳ ಮತ್ತು ದರೋಡೆ ಯತ್ನದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಮಲಾಡ್‌ ನ ಕುರಾರ್‌ ನಿವಾಸಿಯಾಗಿದ್ದು, ಯಾವುದೇ ಕೆಲಸವಿಲ್ಲದೆ ನಿರುದ್ಯೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಸುಮಾರು 38 ವರ್ಷದ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಒಳಗಿನಿಂದ ಬಾಗಿಲು ಲಾಕ್ ಮಾಡಿದ್ದಾನೆ. ನನ್ನ ಬಾಯಿ ಮುಚ್ಚಿಸಿ ಬೆಲೆ ಬಾಳುವ ಮೊಬೈಲ್, ವಸ್ತುಗಳು, ನಗದು ಹಣ, ಎಟಿಎಂ ಕಾರ್ಡ್ ನೀಡುವಂತೆ ಕೇಳಿದ್ದಾನೆ. ಆದರೆ ನಾನು ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳಿಲ್ಲ,ಚಿನ್ನಾಭರಣಗಳಿಲ್ಲ ಎಂದು ಹೇಳಿದ್ದೇನೆ. ಆಗ ಆರೋಪಿ ನನಗೆ ಮುತ್ತಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಸಂತ್ರಸ್ತ ಮಹಿಳೆ ಘಟನೆಯ ಬಗ್ಗೆ ತಿಳಿಸಿದ್ದಾಳೆ.

ಆರೋಪಿಯ ವಿಚಾರಣೆ ನಡೆಸುತ್ತಿರುವ ಕುರಾರ್ ಪೊಲೀಸರು ಹೇಳುವಂತೆ, ಆರೋಪಿಗೆ ಈ ಹಿಂದೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಆರೋಪಿ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದು, ಪ್ರಸ್ತುತ ನಿರುದ್ಯೋಗಿಯಾಗಿದ್ದಾನೆ, ಕುಟುಂಬ ನಿರ್ವಹಣೆಗೆ ಈ ಕೃತ್ಯವೆಸಗಿರುವ ಸಾಧ್ಯತೆಯಿದೆ ಪ್ರಕರಣ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

Back to top button
error: Content is protected !!