ಇತರೆ
ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಪತ್ತೆ, ಕೊಲೆ ಶಂಕೆ!
Views: 26
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಒಂದು ದಿನದ ನವಜಾತ ಶಿಶುವನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಪಾರ್ಲರ್ ರಸ್ತೆಯಲ್ಲಿ ನಡೆದಿದೆ. ಶೇಷಾದ್ರಿಪುರಂ ರೈಲ್ವೆ ಪಾರ್ಲರ್ ರಸ್ತೆಯ ಬದಿಯ ಕಸದ ತೊಟ್ಟಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ.
ಮಗುವಿನ ಮೃತದೇಹವನ್ನು ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಶೇಷಾದ್ರಿಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋಗಳನ್ನು ಕಲೆಹಾಕಿ ಆರೋಪಿಗಳ ಜಾಡು ಸಂಗ್ರಹಿಸಲಾಗುತ್ತಿದೆ.






