ರಾಜಕೀಯ

ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮನೆಯ ಮೇಲೆ ಕಲ್ಲು ತೂರಾಟ

Views: 129

ಮಂಗಳೂರು, ಕಾಂಗ್ರೆಸ್ ಮುಖಂಡ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನಗರದ ಮನೆಯ ಮೇಲೆ ಕಿಡಿಗೇಡಿಗಳು ನಿನ್ನೆ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ.

ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಖಂಡಿಸಿ ನಡೆದ ಕಾಂಗ್ರೆಸ್ ನಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಐವನ್ ಡಿಸೋಜ ರಾಜ್ಯಪಾಲರಿಗೆ ಬಾಂಗ್ಲಾ ಪ್ರಧಾನಿಗಾದ ಪರಿಸ್ಥಿತಿ ಬರಬಹುದು ಎಂಬ ಹೇಳಿಕೆ ನೀಡಿದ್ದರು.

ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಬಿಜೆಪಿ ಕಾರ್ಯಕರ್ತರು ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ. ಐವನ್ ಡಿಸೋಜಾ ಅವರು ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪಕ್ಷದ ಸಭೆಗೆ ಹೋಗಿದ್ದಾಗ ಐದಾರು ಮಂದಿಯ ಗುಂಪು ರಾತ್ರಿ 11ರ ಸುಮಾರಿಗೆ ನಗರದ ವೆಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ.

ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, “ರಾತ್ರಿ ಹೆಲ್ಮೆಟ್ ಹಾಕಿ ಬಂದವರು ಐವನ್ ಡಿಸೋಜ ಅವರ ಮನೆಗೆ ಕಲ್ಲು ಬಿಸಾಡಿದ್ದಾರೆ. ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.

Related Articles

Back to top button
error: Content is protected !!