ಕಾಂತಾರದ ರುಕ್ಮಿಣಿ ವಸಂತ್ ಬಿಕಿನಿ ಫೋಟೋ ಭಾರಿ ವೈರಲ್: ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟಿ!
Views: 141
ಕನ್ನಡ ಕರಾವಳಿ ಸುದ್ದಿ: ಕಾಂತಾರ ಸಿನಿಮಾದ ಕನಕವತಿ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ಅವರ ಬಿಕಿನಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಇದನ್ನು ಕಂಡ ರುಕ್ಮಿಣಿ ವಸಂತ್ ಕಿಡಿಗೇಡಿಗಳ ವಿರುದ್ಧ ಕಿಡಿಕಾರಿದ್ದಾರೆ.
ರುಕ್ಮಿಣಿ ವಸಂತ್ ಬಿಕಿನಿ ಧರಿಸಿ ಈಜುಕೊಳಕ್ಕೆ ಇಳಿಯುತ್ತಿರುವ ಫೋಟೋ ಹಗೂ ವಿಡಿಯೋಗಳು ಎರಡು ದಿನಗಳಿಂದ ಭಾರಿ ವೈರಲ್ ಆಗಿವೆ. ರುಕ್ಮಿಣಿ ವಸಂತ್ ಅವರ ಬೋಲ್ಡ್ ಅವತಾರ ಕಂಡು ಅಭಿಮಾನಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ. ಇದು ನಿಜಕ್ಕೂ ರುಕ್ಮಿಣಿ ವಸಂತ್ ಅವರೆಯೇ ಎಂದು ಹುಬ್ಬೇರಿಸಿದ್ದಾರೆ. ಫೋಟೋ, ವಿಡಿಯೋಗಳು ತೀವ್ರ ವೈರಲ್ ಆಗುತ್ತಿದ್ದಂತೆ ಸ್ವತಃ ರುಕ್ಮಿಣಿ ವಸಂತ್ ಸ್ಪಷ್ಟನೆ ನೀಡಿದ್ದಾರೆ.ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ವಿಡಿಯೋ ಮತ್ತು ಫೋಟೋಗಳು ಸಂಪೂರ್ಣವಾಗಿ ನಕಲಿ ಮತ್ತು ಸೃಷ್ಟಿಸಲ್ಪಟ್ಟವುಗಳಾಗಿವೆ’ ಎಂದು ಆಕ್ರೋಶ ಹೊರಹಾಕಿದ್ದಾರೆ. ‘ಇದು ಕೃತಕ ಬುದ್ಧಿಮತ್ತೆ ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನನ್ನ ಮುಖವನ್ನು ಬೇರೊಬ್ಬರ ದೇಹಕ್ಕೆ ಜೋಡಿಸಿ ಸೃಷ್ಟಿಸಿರುವ ಪಿತೂರಿಯಾಗಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಂತಹ ಕೃತ್ಯಗಳು ಒಬ್ಬ ವ್ಯಕ್ತಿಯ ಘನತೆಗೆ ಧಕ್ಕೆ ತರುತ್ತವೆ ಎಂದು ಬೇಸರ ವ್ಯಕ್ತಪಡಿಸಿರುವ ರುಕ್ಮಿಣಿ, ಸುಳ್ಳು ಫೋಟೋಗಳನ್ನು ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುವುದಾಗಿ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಅಲ್ಲದೆ ಅಭಿಮಾನಿಗಳು ಮತ್ತು ಸಾರ್ವಜನಿಕರು ಇಂತಹ ಯಾವುದೇ ನಕಲಿ ವಿಡಿಯೋಗಳನ್ನು ನಂಬಬಾರದು ಮತ್ತು ಅದನ್ನು ಶೇರ್ ಮಾಡಬಾರದು ಎಂದು ವಿನಂತಿಸಿದ್ದಾರೆ.






