ಯುವಜನ
ಕಾನ್ಸ್‌ಟೇಬಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವಿದ್ಯಾರ್ಥಿನಿ ಜನ್ಮದಿನದಂದೇ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು!
Views: 65
ಕನ್ನಡ ಕರಾವಳಿ ಸುದ್ದಿ: ಜನ್ಮದಿನದಂದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ಅಜಂ ನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ನಡೆದಿದೆ.
ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ ನಾಯಕ (21) ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಇತ್ತ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಭವಿಸಿದ ವಿಷಯ ತಿಳಿಯುತ್ತಿದ್ದಂತೆಯೇ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.






