ಇತರೆ

ಕಾಫಿ ಕೊಯ್ಲು ಮಾಡುತ್ತಿದ್ದಾಗ ಕಾಡುಕೋಣ ದಾಳಿ: ಮಹಿಳೆ ಸಾವು 

Views: 78

ಕನ್ನಡ ಕರಾವಳಿ ಸುದ್ದಿ: ಕಾಫಿ ಕೊಯ್ದು ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಬಸೂರಿ ಬೀಬಿ (42 ವರ್ಷ) ಸಾವನ್ನಪ್ಪಿರುವ ದುರ್ದೈವಿ.

ಮೂಡಿಗೆರೆ ತಾಲ್ಲೂಕಿನ ಹಳೇಕೋಟೆ ಗ್ರಾಮದಲ್ಲಿ ಬುಧವಾರ ಬೆಳೆಗ್ಗೆ ಈ ದುರ್ಘಟನೆ ನಡೆದಿದೆ. ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಅವರ ಶಾರದಾಂಭ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ.

ಬುಧವಾರ ಬೆಳಿಗ್ಗೆ ಅಸ್ಸಾಂ ಮೂಲದ ಕಾರ್ಮಿಕರು ರಮೇಶ್ ಅವರ ತೋಟದಲ್ಲಿ ಕಾಫಿ ಕೊಯ್ದು ಮಾಡುವುದರಲ್ಲಿ ನಿರತರಾಗಿದ್ದರು. ಸುಮಾರು 11 ಗಂಟೆ ಸಮಯದಲ್ಲಿ ಏಕಾಏಕಿ ಕಾಡುಕೋಣವೊಂದು ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಅಸ್ಸಾಂ ಮೂಲದ ವಿವಾಹಿತ ಮಹಿಳಾ ಕಾರ್ಮಿಕರೊಬ್ಬರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಡುಕೋಣ ಮಹಿಳೆಯ ಹೊಟ್ಟೆ ಮತ್ತು ಎದೆಯ ಭಾಗದಕ್ಕೆ ತಮ್ಮ ಕೊಂಬಿನಿಂದ ತಿವಿದಿದ್ದು, ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ದಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

Related Articles

Back to top button
error: Content is protected !!