ಕೃಷಿ
ಕಾಫಿ ತೋಟದಲ್ಲಿ ಆನೆ ಸಾವು ತನಿಖೆಗೆ ಪ್ರಾಣಿ ಪ್ರಿಯರ ಒತ್ತಾಯ

Views: 32
ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪದ ಕಂಚಿನ ಕಲ್ಲು ದುರ್ಗದ ಖಾಸಗಿ ಕಾಫಿ ತೋಟದಲ್ಲಿ ಒಂಟಿ ಸಲಗ ಸಾವಪ್ಪಿದ್ದು ಹಲವು ಅನುಮಾನಗಳು ಕಾಣಿಸಿ ಕೊಂಡಿದೆ.
ಇತ್ತೀಚೆಗೆ ಮೂಡಿಗೆರೆ, ಆಲ್ದೂರು ಸುತ್ತಮುತ್ತ ಆನೆ ಮಾನವ ಸಂಘರ್ಷ ತಾರಕಕ್ಕೆ ಏರುತ್ತಿದ್ದು, ಈ ಸಂದರ್ಭದಲ್ಲಿ ಆನೆ ಸಾವಪ್ಪಿರುವುದು ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಈ ಆನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ತಯಾರಿ ನಡೆಸಿತ್ತು. ಇಲಾಖೆ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ತನಿಖೆ ಮಾಡಿ ಪ್ರಕರಣ ದಾಖಲು ಮಾಡಬೇಕು ಎಂದು ಪ್ರಾಣಿ ಪ್ರಿಯರು ಒತ್ತಾಯಿಸಿದ್ದಾರೆ.