ಕಾರವಾರ: ಪ್ರೀತಿಸುವಂತೆ ಜೆಡಿಎಸ್ ನಾಯಕಿಯ ಪುತ್ರನ ಕಿರುಕುಳ, ಯುವತಿ ಆತ್ಮಹತ್ಯೆ
Views: 110
ಕನ್ನಡ ಕರಾವಳಿ ಸುದ್ದಿ: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ನಡೆದಿದೆ. ರಿಶೆಲ್ ಡಿಸೋಜಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಚೈತ್ರಾ ಕೋಠಾರಕರ ಪುತ್ರ ಚಿರಾಗ್ ಪ್ರೀತಿಸುವಂತೆ ಯುವತಿಗೆ ಪೀಡಿಸುತ್ತಿದ್ದ. ಇದರಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೈತ್ರಾ ಕೋಠಾರಕರ ಪುತ್ರ ಚಿರಾಗ್, ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿ ನಿವಾಸಿ ರಿಶೆಲ್ ಡಿಸೋಜಾಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಕಳೆದ ಕೆಲ ದಿನಗಳಿಂದ ಯುವತಿ ಮನೆ ಬಳಿ ಬಂದು ಹೋಗುತ್ತಿದ್ದ. ಪ್ರೀತಿ ಮಾಡಲು ಯುವತಿ ನಿರಾಕರಿಸಿದ್ದಕ್ಕೆ ಬೇಗ ಸತ್ತು ಹೋಗು ಎಂದು ಚಿರಾಗ್ ಹೇಳಿದ್ದ. ಇದರಿಂದ ನೊಂದ ರಿಶಾಲ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ರಿಶಾಲ್ ತಂದೆ ಕ್ರಿಸ್ತೋದ್ ಫ್ರಾನ್ಸಿಸ್ ದೂರಿನ ಮೇರೆಗೆ ಚಿರಾಗ್ ವಿರುದ್ಧ ಕದ್ರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






