ಇತರೆ

ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ; ಸಾವಿನ ಸುತ್ತ ಅನುಮಾನ

Views: 37

ಕನ್ನಡ ಕರಾವಳಿ ಸುದ್ದಿ: ಹುಬ್ಬಳ್ಳಿ ಕಡೆಯಿಂದ ಅಂಕೋಲ ಕಡೆ ತೆರಳುತಿದ್ದ ಕಾರೊಂದು ಅಪಘಾತಕ್ಕೀಡಾಗಿ ಬೆಂಕಿ ತಗುಲಿದ ಪರಿಣಾಮ ಕಾರಿನೊಳಗಿದ್ದ ಚಾಲಕ ಸುಟ್ಟು ಕರಕಲಾದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರು ಚಾಲಕ ಗುರುತು ಸಿಗದಂತೆ ಸುಟ್ಟು ಕರಕಲಾಗಿದ್ದು, ವೋಕ್ಸ್ ವ್ಯಾಗನ್ ಕಂಪನಿಗೆ ಸೇರಿದ ಕಾರು ಎಂದು ತಿಳಿದು ಬಂದಿದೆ.

ಈ ಸಾವು ಸಹಜ ಸಾವಲ್ಲ ಎಂಬ ಅನುಮಾನ ಮೂಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!