ಇತರೆ
ಕಾರು ಅಪಘಾತ: ಯುವಕ ಸ್ಥಳದಲ್ಲಿಯೇ ಸಾವು
Views: 76
ಕನ್ನಡ ಕರಾವಳಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಕತ್ತೂರು – ಮರಗೋಡು ರಸ್ತೆಯ ಬಕ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಮರಗೋಡು ನಿವಾಸಿಯಾದ ಬಿದ್ರುಪಣೆ ಸೋಮಣ್ಣ ಅವರ ಪುತ್ರ ಪ್ರವೀಣ್ (35) ಮೃತಪಟ್ಟ ದುರ್ದೈವಿ.
ಶುಕ್ರವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಪ್ರವೀಣ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಬಕ್ಕ ಬಳಿ ವಾಹನವು ಅಪಘಾತಕ್ಕೀಡಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಜಖಂಗೊಂಡಿದ್ದು, ಚಾಲಕ ಪ್ರವೀಣ್ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.






