ಧಾರ್ಮಿಕ

ಕಾರು ಅಪಘಾತ :ಹಿರೇಮಠದ ಗುರುಲಿಂಗ ಶಿವಾಚಾರ್ಯ ಲಿಂಗೈಕ್ಯ

Views: 46

ಕಲಬುರಗಿ: ಹಿರೇಮಠದ ಗುರುಲಿಂಗ ಶಿವಾಚಾರ್ಯರರು ಪ್ರಯಾಣಿಸುತ್ತಿದ್ದ ಕಾರು ಅಪಘಾತದ ಘಟನೆ ನಡೆದಿದೆ.

ಅಪಘಾತದಲ್ಲಿ ಆಳಂದ ತಾಲೂಕಿನ 43 ವರ್ಷದ ಬಂಗರಗಾ ಪಶು ಹಿರೇಮಠದ ಗುರುಲಿಂಗ ಶಿವಾಚಾರ್ಯರರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಕಿಣ್ಣಿ ಸುಲ್ತಾನ ಗ್ರಾಮದ ಮಠಾಧೀಶ ಶಾಂತಲಿಂಗ ಶಿವಾಚಾರ್ಯರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯ ಆಳಂದ ಪಟ್ಟಣದ ಬಸ್ ಡಿಪೋ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಿವಾ ಶಾಂತಲಿಂಗೇಶ್ವರ ಶಿವಾಚಾರ್ಯರು ಗಂಭೀರವಾಗಿ ಗಾಯಗೊಂಡಿದ್ದರು ಹೀಗಾಗಿ ಗುರುಲಿಂಗ ಶಿವಾಚಾರ್ಯರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಹಾಗೂ ಶಿವಾ ಶಾಂತಲಿಂಗೇಶ್ವರ ಶಿವಾಚಾರ್ಯರನ್ನು ಆಳಂದನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಚಿಕಿತ್ಸೆ ಫಲಿಸದೆ ಲಿಂಗೈಕ್ಯರಾಗಿದ್ದಾರೆ.

Related Articles

Back to top button
error: Content is protected !!