ಇತರೆ

ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು: ಗ್ರಾಮಸ್ಥರಿಂದ ಪ್ರತಿಭಟನೆ

Views: 0

ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿ ಸಾವಿಗೀಡಾದ ಘಟನೆ ಶಿಗ್ಗಾವಿ ತಾಲೂಕಿನ ನೀರಲಗಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ನಡೆದಿದೆ.

ವಿರೂಪಾಕ್ಷಪ್ಪ ಕಾಳಿ ( 60)ಮತ್ತು ಚಿದಾನಂದ (55) ಮೃತಪಟ್ಟವರು.

ಶಿಗ್ಗಾವಿ ಪಟ್ಟಣಕ್ಕೆ ತೆರಳಲು ನೀರಲಗಿ ಬಳಿ ಹೆದ್ದಾರಿ ಬದಿ ನಿಂತಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದಿದೆ. ತೀವ್ರ ಗಾಯಗೊಂಡಿದ್ದ ಚಿದಾನಂದ ಅವರನ್ನು ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬಾರದ ಕಾರಣ ವ್ರತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಕಾಲಕ್ಕೆ ಅಂಬುಲೆನ್ಸ್ ಬರದೇ ಇರುವುದರಿಂದ ಚಿದಾನಂದ ಸಾವನಪ್ಪಿದ್ದಾರೆ. ಹೆದ್ದಾರಿ ಬದಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರ ಸುರಕ್ಷತೆಗೆ ಯಾವುದೇ ವ್ಯವಸ್ಥೆ ಇಲ್ಲ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!