ಇತರೆ

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ:ಬಾವಿಗೆ ಬಿದ್ದ ಕಾರು, 6 ಮಂದಿ ಸಾವು 

Views: 156

ಕನ್ನಡ ಕರಾವಳಿ ಸುದ್ದಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅವಘಡದಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ಬಾವಿಗೆ ಬಿದ್ದ ಪರಿಣಾಮ 6 ಮಂದಿ ಅಸುನೀಗಿದ್ದಾರೆ.

ಮಧ್ಯಪ್ರದೇಶದ ಮಂಡ್‌ಸೌರ್ ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ಭಾನುವಾರ ಈ ದುರ್ಘಟನೆ ನಡೆದಿದೆ.

ಗ್ರಾಮದ ದೇವಸ್ಥಾನದ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಹಾಗೂ ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ

ದೇವಸ್ಥಾನಕ್ಕೆ ಹೋಗುತ್ತಿದ್ದ ಕಾರು: ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರೆಲ್ಲರೂ ರತ್ಲಾಮ್ ಜಿಲ್ಲೆಯ ತಾಲ್ನಿಂದ ಮಂದಸೌರ್ ಜಿಲ್ಲೆಯ ಅಂಟಾರಿ ಗ್ರಾಮದ ಮಾತಾ ಮಂದಿರಕ್ಕೆ ಹೋಗುತ್ತಿದ್ದರು. ಘಟನಾ ಸ್ಥಳಕ್ಕೆ ಮಲ್ಹಾರಗಢ ಎಸ್‌ಡಿಒಪಿ ನರೇಂದ್ರ ಸೋಲಂಕಿ ಮತ್ತು ಹೆಚ್ಚುವರಿ ಎಸ್‌ಪಿ ಗೌತಮ್ ಸೋಲಂಕಿ ಆಗಮಿಸಿ, ಪೊಲೀಸ್ ಸಿಬ್ಬಂದಿಯೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಮೃತರ ಸಂಖ್ಯೆ ಏರಿಕೆ ಸಾಧ್ಯತೆ: ಘಟನೆ ಕುರಿತಂತೆ ಮಲ್ಹಾರಗಢ ಎಸ್‌ಡಿಒಪಿ ನರೇಂದ್ರ ಸೋಲಂಕಿ ಮಾತನಾಡಿ, “ಸಾವಿನ ಸಂಖ್ಯೆ ಹೆಚ್ಚಾಗಬಹುದು. ಪ್ರಸ್ತುತ 6 ಜನರ ಸಾವು ದೃಢಪಟ್ಟಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ.

ಕಾರಿನಲ್ಲಿ ಒಟ್ಟು 12 ಮಂದಿ ಇದ್ದರು ಎಂದು ಹೇಳಲಾಗಿದೆ. ಡಿಕ್ಕಿ ತೀವ್ರತೆಗೆ ಕಾರು ಏಕಾಏಕಿ ಬಾವಿಗೆ ಬಿದ್ದಿದ್ದು, ಅದರಲ್ಲಿದ್ದವರೆಲ್ಲರು ಪ್ರಜ್ಞೆ ತಪ್ಪಿದ್ದರು ಎಂದು ವರದಿಯಾಗಿದೆ.

 

Related Articles

Back to top button