ಇತರೆ
ಕಾರು ಸೇತುವೆಯಿಂದ ಕೆಳಗೆ ಬಿದ್ದು 4 ಅಯ್ಯಪ್ಪ ಭಕ್ತರ ಸಾವು
Views: 55
ಕನ್ನಡ ಕರಾವಳಿ ಸುದ್ದಿ:ಬೆಂಗಳೂರು-ಚೆನ್ನೈ ಶರ ವೇಗದ ಹೆದ್ದಾರಿಯಲ್ಲಿ ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ.
ಭಾನುವಾರ ತಡರಾತ್ರಿ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹ್ಯುಂಡಾಯ್ ವರ್ನಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಬಳಿಕ ಕಾರು ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತಪಟ್ಟಿದ್ದು, ಇವರೆಲ್ಲರೂ ತಮಿಳುನಾಡಿನ ಚೆನ್ನೈ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ನಾಲ್ವರನ್ನು ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಳಿಸಿಕೊಳ್ಳಲು ವೈದ್ಯರು ಬಲವಾದ ಯತ್ನ ನಡೆಸಿದರೂ, ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಕೊನೆಯುಸಿರೆಳೆದಿದ್ದಾರೆ.






