ಯುವಜನ
ಕಾರ್ಕಳ:ತಾಯಿ ಹೊಸ ಮೊಬೈಲ್ ತೆಗೆಸಿಕೊಡಲಿಲ್ಲ ಎಂದು ಜಗಳ ಮಾಡಿಕೊಂಡು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
Views: 102
ಕನ್ನಡ ಕರಾವಳಿ ಸುದ್ದಿ: ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಾಗಿದೆ.
ಮೃತ ವಿದ್ಯಾರ್ಥಿ ಸುಮಂತ ದೇವಾಡಿಗ (16)
ಕಾರ್ಕಳದ ನಂದಳಿಕೆಯ ನಿವಾಸಿಯಾಗಿದ್ದು, ಸುಮಂತನು ನಿಟ್ಟೆ ಕಾಲೇಜಿನಲ್ಲಿ ಮೊದಲನೇ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸುಮಂತನು ಮನೆಯಲ್ಲಿ ತನ್ನ ತಾಯಿಯೊಂದಿಗೆ ಹೊಸ ಮೊಬೈಲ್ ತೆಗೆದುಕೊಡಬೇಕೆಂದು ಜಗಳ ಮಾಡಿ ಮನೆ ಬಿಟ್ಟು ಹೋಗಿದ್ದು ಆತನನ್ನು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ.
ನ.13 ರಂದು ಸುಮಂತನನ್ನು ಹುಡುಕಾಡುತ್ತಿದ್ದಾಗ ಮಧ್ಯಾಹ್ನದ ಹೊತ್ತಿಗೆ ನಂದಳಿಕೆ ಗ್ರಾಮದ ಕೊಡ್ಸರಬೆಟ್ಟು ಎಂಬಲ್ಲಿ ಸೂರ್ಯಕಾಂತ ಶೆಟ್ಟಿ ಎಂಬುವವರ ಜಾಗದಲ್ಲಿರುವ ಕಲ್ಲಿನ ಕೋರೆಯ ನಿಂತ ನೀರಿನ ಬಳಿ ಆತನ ಚಪ್ಪಲಿ ಕಂಡುಬಂದಿದ್ದು ಅನುಮಾನಗೊಂಡು ನೀರಿನಲ್ಲಿ ಹುಡುಕಾಡಿದಾಗ ಆತನ ಮೃತದೇಹ ಪತ್ತೆಯಾಗಿರುತ್ತದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.






