ಇತರೆ

ಕಾರ್ಕಳದ ಉದ್ಯಮಿ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ 

Views: 255

ಕನ್ನಡ ಕರಾವಳಿ ಸುದ್ದಿ: ಕಾರ್ಕಳದ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದ ಜೋಡುರಸ್ತೆ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತರನ್ನು 51 ವರ್ಷದ ಮಂಜುನಾಥ್ ಪೈ ಎಂದು ಗುರುತಿಸಲಾಗಿದೆ.

ಜೋಡುರಸ್ತೆ ಬಳಿಯ ತಮ್ಮ ಹೊಸ ಫ್ಲಾಟ್‌ನಲ್ಲಿ ಮಂಜುನಾಥ್ ಪೈ ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆ ದೇವಸ್ಥಾನಕ್ಕೆ ತೆರಳಿ ಮನೆಗೆ ಮರಳಿದ ಬಳಿಕ ಈ ಘಟನೆ ನಡೆದಿದೆ ಎನ್ನಲಾಗಿದೆ.ಸ್ಥಳೀಯವಾಗಿ ಫ್ಲಾಟ್ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಮಂಜುನಾಥ್ ಪೈ ಅವರು ಜೋಡುರಸ್ತೆ ಸುತ್ತಮುತ್ತ ಹಲವು ಫ್ಲಾಟ್‌ಗಳನ್ನು ನಿರ್ಮಿಸಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಹಣಕಾಸಿನ ಸಮಸ್ಯೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!