ಕರಾವಳಿ
ಕಾರ್ಕಳ: ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಆಘಾತದಿಂದ ಸಾವು

Views: 107
ಕಾರ್ಕಳ: ನಿಟ್ಟೆ ಸಮೀಪ ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ವೇಳೆ ತಂಗಿ ವಿದ್ಯುತ್ ಅಪಘಾತದಿಂದ ದಾರುಣ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಲಲಿತಾ ಬೋಂಡ್ರ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಅವರು ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರು. ಅಣ್ಣನ ತಿಥಿ ಪೂರ್ವ ಸಿದ್ಧತೆ ಕಾರ್ಯಕ್ಕೆ ತಂಗಿ ಲಲಿತಾ ಬೋಂಡ್ರ ತೊಡಗಿಸಿಕೊಂಡಿದ್ದರು. ರಾತ್ರಿ ಅಡುಗೆ ಪಾತ್ರೆ ತೊಳೆಯುತ್ತಿದ್ದ ವೇಳೆ ಮನೆ ಹೊರಾಂಗಣದಲ್ಲಿ ಅಳವಡಿಸಲಾಗಿದ್ದ ಶಾಮಿಯಾನ ಕಬ್ಬಿಣದ ಕಂಬ ಹಿಡಿಯುತ್ತಿದ್ದಂತೆ ವಿದ್ಯುತ್ ಪ್ರವಹಿಸಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಶಾಮಿಯಾನ ಅಳವಡಿಸಿದಾಗ ಅದರ ಕಬ್ಬಣದ ಕಂಬಕ್ಕೆ ಟ್ಯೂಬ್ ಲೈಟ್ ಅಳವಡಿಸಲಾಗಿ ಅದರ ಮೂಲ ವಿದ್ಯುತ್ ಪ್ರವಹಿಸಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.