ಇತರೆ

ಕಾರ್ಕಳ: ಅಪಘಾತದಲ್ಲಿ ಗಂಭೀರಗಾಯಗೊಂಡಿದ್ದ  ಕಂದಾಯ ನಿರೀಕ್ಷಕ ನಿಧನ

Views: 41

ಕನ್ನಡ ಕರಾವಳಿ ಸುದ್ದಿ: ಶಿವತಿಕೆರೆ ಸಮೀಪ ರವಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ, ನಂದಳಿಕೆ ನಿವಾಸಿ ಶಿವಪ್ರಸಾದ್‌ ರಾವ್ (58) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರ ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ರವಿವಾರ ಸಂಜೆ ಶಿವಪ್ರಸಾದ್ ರಾವ್ ಅವರು ಕಾರ್ಕಳದಿಂದ ತಮ್ಮ ಸ್ಕೂಟರಿನಲ್ಲಿ ನಂದಳಿಕೆಯಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಶಿವತಿಕೆರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ತಲುಪಿದಾಗ, ಸ್ಕೂಟರ್‌ನ ಇಂಡಿಕೇಟರ್ ನೀಡಿ ಯೂ-ಟರ್ನ್  ಪಡೆಯಲು ಮುಂದಾಗಿದ್ದರು. ಇದೇ ವೇಳೆ ಹಿಂದಿನಿಂದ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಬೈಕ್ ಅವರ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಶಿವಪ್ರಸಾದ್ ರಾವ್ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ವೈದ್ಯರ ಸತತ ಪ್ರಯತ್ನದ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಅವರು ಕೊನೆಯುಸಿರೆಳೆದಿದ್ದಾರೆ.

ಕಂದಾಯ ಇಲಾಖೆಯಲ್ಲಿ ಅತ್ಯಂತ ಕರ್ತವ್ಯನಿಷ್ಠ ಹಾಗೂ ಜನಸ್ನೇಹಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಶಿವಪ್ರಸಾದ್‌ ರಾವ್ ಅವರ ನಿಧನಕ್ಕೆ ತಾಲೂಕು ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

Related Articles

Back to top button
error: Content is protected !!