ಇತರೆ

ಕಾರ್ಕಳ ಜೋಡುಕಟ್ಟೆಯಲ್ಲಿ ಖಾಸಗಿ ಬಸ್ – ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Views: 37

ಕನ್ನಡ ಕರಾವಳಿ ಸುದ್ದಿ:ಕಾರ್ಕಳದ ಮಿಯ್ಯಾರು ಜೋಡುಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಚಾಲಕ ಗಾಯಗೊಂಡಿದ್ದಾರೆ.

ಖಾಸಗಿ ಬಸ್ ಬಜಗೋಳಿಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ, ಅದೇ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಗಾಯಗೊಂಡ ಆಟೋ ರಿಕ್ಷಾ ಚಾಲಕ ಚಂದ್ರಕಾಂತ್ ಶೆಣೈ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸಲು ಸ್ಥಳದಲ್ಲಿ ಅವೈಜ್ಞಾನಿಕ ರಸ್ತೆ ತಿರುವು ಕಾರಣವಾಗಿರಬಹುದು ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

Related Articles

Back to top button
error: Content is protected !!