ಕಾರ್ಕಳ: ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು
Views: 87
ಕನ್ನಡ ಕರಾವಳಿ ಸುದ್ದಿ: ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ(ಮಾ.19) ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ.
ಹಿರಿಯಡ್ಕ ನಿವಾಸಿ, ಗಣೇಶ್ ನಾಯಕ್ (27) ಮೃತ ಯುವಕ. ಗಣೇಶ್ ನಾಯಕ್ ತನ್ನ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಹೋಗುತ್ತಿರುವಾಗ ಆರೋಪಿ ತನ್ನ ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗಣೇಶ್ ನಾಯಕ್ ಬೈಕ್ ಸಮೇತ ರಸ್ತೆಗೆ ಬಿದ್ದರು.
ಈ ಸಂದರ್ಭದಲ್ಲಿ ಟಿಪ್ಪರ್ ಲಾರಿಯ ಹಿಂಬದಿಯ ಚಕ್ರ ಗಣೇಶ್ ನಾಯಕ್ ತಲೆಯ ಮೇಲೆ ಹರಿದಿದೆ. ಹೆಲ್ಮಟ್ ಹಾಕಿದ್ದರೂ ಗಂಭೀರವಾಗಿ ಗಾಯಗೊಂಡ ಗಣೇಶ್ ನಾಯಕ್ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಈ ಸಂದರ್ಭದಲ್ಲಿ ಟಿಪ್ಪರ್ ಲಾರಿಯ ಹಿಂಬದಿಯ ಚಕ್ರ ಗಣೇಶ್ ನಾಯಕ್ ತಲೆಯ ಮೇಲೆ ಹರಿದಿದೆ. ಹೆಲ್ಮೆಟ್ ಹಾಕಿದ್ದರೂ ಗಂಭೀರವಾಗಿ ಗಾಯಗೊಂಡ ಗಣೇಶ್ ನಾಯಕ್ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.






