ಜನಮನ
ಕಾರ್ಕಳ, ಬ್ರಹ್ಮಾವರ, ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಪಾಯಕಾರಿ ಸಿಡಿಮದ್ದು ಸಂಗ್ರಹ, ಪೊಲೀಸರಿಂದ ದಾಳಿ
Views: 191
ಕನ್ನಡ ಕರಾವಳಿ ಸುದ್ದಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಾಗೂ ಅಪಾಯಕಾರಿಯಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಇಟ್ಟುಕೊಂಡಿರುವ ಬಗ್ಗೆ ಬಂದಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಕಳ, ಬ್ರಹ್ಮಾವರ ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಮಿಯಾರ್, ಕುಂಜಾಲು ಮತ್ತು ತೆಕ್ಕಟ್ಟೆ ಪ್ರದೇಶಗಳಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ದೊಡ್ಡ ಪ್ರಮಾಣದ ಸಿಡಿಮದ್ದುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸಿಡಿಮದ್ದುಗಳನ್ನು ಅಧಿಕೃತ ಸ್ಫೋಟಕ ಸಂಗ್ರಹಾಗಾರ ಪ್ರದೇಶಗಳಿಗೆ ಸ್ಥಳಾಂತರಿಸಿ ನಂತರ ನಿಯಮಾನುಸಾರ ನಾಶಪಡಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಈ ಕುರಿತು Explosives Act 9B(1)(b) BNS 287, 288 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಿಡಿಮದ್ದು ಸಂಗ್ರಹಣೆ ಮತ್ತು ಖರೀದಿ ಕುರಿತು ತನಿಖೆ ಮುಂದುವರಿಸಿದ್ದಾರೆ.






