ಯುವಜನ
ಕಾಲೇಜಿನ ಕಟ್ಟಡದ ಮೇಲೆ ಹಾರಿಸಿದ್ದ ಗಾಳಿಪಟ ಹಿಡಿಯಲು ಹೋಗಿ ವಿದ್ಯಾರ್ಥಿ ಸಾವು
Views: 51
ಕನ್ನಡ ಕರಾವಳಿ ಸುದ್ದಿ: ಹಾರಿಸಿದ್ದ ಗಾಳಿಪಟ ಹಿಡಿಯಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ನಡೆದಿದೆ.
19 ವರ್ಷದ ಶಶಿಕುಮಾರ್ ಶಿವಾನಂದ ಮೃತ ಯುವಕ. ಶಶಿ ಕುಮಾರ್ ಖಾಸಗಿ ಕಾಲೇಜಿನ ಕಟ್ಟಡದ ಮೇಲೆ ಗಾಳಿಪಟ ಹಾರಿಸಲು ಹೋಗಿದ್ದ. ಗಾಳಿಪಟ ಹಾರಿಸುವಾಗ ದಾರ ತುಂಡಾಗಿದ್ದು. ಈ ವೇಳೆ ಹಾರಿ ಹೋಗುತ್ತಿದ್ದ ಗಾಳಿಪಟ ಹಿಡಿಯಲು ಹೋಗಿ, ಕಟ್ಟಡದ ಮೇಲಿಂದ ಬಿದ್ದಿದ್ದಾನೆ.
ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






