ಯುವಜನ
ಕಾಲೇಜಿನ ಫ್ಯಾಷನ್ ಡಿಸೈನಿಂಗ್ ವಿದ್ಯಾರ್ಥಿನಿ ಹಠಾತ್ ಸಾವು
Views: 73
ಕನ್ನಡ ಕರಾವಳಿ ಸುದ್ದಿ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಿಳಿನೆಲೆ ಗ್ರಾಮದ ಸೂಡ್ಲುವಿನಲ್ಲಿ ನಡೆದಿದೆ.
ಮೃತರನ್ನು ಬಿಳಿನೆಲೆ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡ ಅವರ ಪುತ್ರಿ ಚೈತನ್ಯ (19) ಎಂದು ಗುರುತಿಸಲಾಗಿದೆ.
ಚೈತನ್ಯ ಅವರು ಪುತ್ತೂರಿನ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಡಿಸೆಂಬರ್ 1ರಂದು ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದ ಚೈತನ್ಯ. ಬಿಳಿನೆಲೆ ಮಹಿಳಾ ಭಜನಾ ತಂಡದ ಸಕ್ರಿಯ ಸದಸ್ಯೆಯಾಗಿದ್ದರು. ಮೃತರು ತಂದೆ, ತಾಯಿ, ಓರ್ವ ಸಹೋದರನನ್ನು ಅಗಲಿದ್ದಾರೆ.






