ಇತರೆ

ಕಾಲೇಜು ಬಸ್ ಡಿಕ್ಕಿ: ರಸ್ತೆ ದಾಟುತ್ತಿದ್ದ ತಾಯಿ, ಮಗ ಸ್ಥಳದಲ್ಲೇ ಸಾವು

Views: 207

ಕನ್ನಡ ಕರಾವಳಿ ಸುದ್ದಿ: ಖಾಸಗಿ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ – ಮಗ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ಇಂದು ನಡೆದಿದೆ. ಆಂಧ್ರ ಪ್ರದೇಶದ ಸಂಗೀತಾ (37) ಹಾಗೂ ಅವರ ಮಗ ಪಾರ್ಥ (8) ಮೃತ ದುರ್ದೈವಿಗಳು.

ಘಟನಾ ಸ್ಥಳಕ್ಕೆ ಅಶೋಕ ನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ತಪಾಸಣೆ ನಡೆಸಿದ್ದಾರೆ. ಅಪಘಾತದ ಬಳಿಕ ಬಸ್ ಚಾಲಕ ಸುನೀಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸದ್ಯ ಆತನಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸಂಗೀತಾ, ತಮ್ಮ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಮಕ್ಕಳಿಬ್ಬರನ್ನೂ ಅದೇ ಶಾಲೆಗೆ ಸೇರಿಸಿದ್ದರು. ಇನ್ನು ಅವರ ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ 6:30ರ ಸುಮಾರಿಗೆ ಮಗನೊಂದಿಗೆ ಶಾಲೆಗೆ ತೆರಳುತ್ತಿದ್ದ ಸಂಗೀತಾ ರಸ್ತೆ ದಾಟುವಾಗ ಖಾಸಗಿ ಕಾಲೇಜಿನ ಬಸ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ತಾಯಿ ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.

 

Related Articles

Back to top button
error: Content is protected !!