ಯುವಜನ

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಬರೆದಿಟ್ಟ ಡೆತ್ ನೋಟ್ ನಲ್ಲಿ ಏನಿದೆ?

Views: 77

ಕನ್ನಡ ಕರಾವಳಿ ಸುದ್ದಿ: ಡೆತ್‌ನೋಟ್ ಬರೆದಿಟ್ಟು ಬಿಕಾಂ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ರವೀಂದ್ರನಗರದಲ್ಲಿರುವ ಒಕ್ಕಲಿಗರ ಸಂಘದ ಮಹಿಳಾ ಹಾಸ್ಟೆಲ್‌ನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಲಕ್ಷ್ಮೀ (20) ಎಂದು ಗುರುತಿಸಲಾಗಿದೆ.

ಅರಕಲಗೂಡು ತಾಲೂಕಿನ ಹೊಡೆನೂಡು ಗ್ರಾಮದ ಕೌಸಲ್ಯ ಮತ್ತು ಜಯಣ್ಣ ದಂಪತಿಯ ಪುತ್ರಿಯಾಗಿರುವ ಲಕ್ಷ್ಮೀ, ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಅಕ್ಟೋಬರ್ 17ರಂದು ಹಾಸ್ಟೆಲ್‌ನ ಕೊಠಡಿಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಮೃತಳಾಗುವ ಮುನ್ನ ಲಕ್ಷ್ಮೀ ಡೆತ್‌ ನೋಟ್ ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಅದರಲ್ಲಿ ತನ್ನ ತಂದೆ-ತಾಯಿ ಮತ್ತು ತಮ್ಮನನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಬರೆದಿದ್ದಾಳೆ. “ಸಾರಿ ಅಮ್ಮ, ನೀನು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಆಗಲಿಲ್ಲ. ಯಾರಿಗೂ ಮೋಸ ಮಾಡಿಲ್ಲ, ಯಾರಿಗೂ ನೋವು ಕೊಟ್ಟಿಲ್ಲ. ಆದರೂ ಜೀವನ ತುಂಬಾ ಅನ್ಯಾಯ ಮಾಡಿಬಿಡ್ತು ಅಮ್ಮ. ಎಷ್ಟು ಪ್ರಯತ್ನಿಸಿದರೂ ಬದುಕಲು ಆಗಲಿಲ್ಲ” ಎಂದು ಬರೆದಿದ್ದಾಳೆ ಎನ್ನಲಾಗಿದೆ.

ಅಲ್ಲದೆ, ತನ್ನ ಸಾವಿಗೆ ತಾನೇ ಕಾರಣ ಎಂದು ಉಲ್ಲೇಖಿಸಿದ್ದು, ಯಾರನ್ನೂ ಹೊಣೆ ಮಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿಯ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Related Articles

Back to top button
error: Content is protected !!