ಶಿಕ್ಷಣ
ಕಾವೇರಿ ನದಿಯಲ್ಲಿ ಈಜಲು ಇಳಿದ ಆರು ಮಂದಿ ನೀರು
Views: 33
ಕನ್ನಡ ಕರಾವಳಿ ಸುದ್ದಿ: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಅರ್ಕೇಶ್ವರ ದೇವಸ್ಥಾನದ ಸಮೀಪ ಹರಿಯುವ ಕಾವೇರಿ ನದಿಯಲ್ಲಿ ಈಜಲು ಇಳಿದ ಆರು ಮಂದಿ ನೀರು ಪಾಲಾದ ಘಟನೆ ಭಾನುವಾರ ನಡೆದಿದೆ.
ಕಾವೇರಿ ನದಿಯಲ್ಲಿ ಮುಳುಗಿ ಓರ್ವ ಬಾಲಕ ಸೇರಿದಂತೆ ಆರು ಮಂದಿ ಮೃತಪಟ್ಟ ಘಟನೆ ಕೆ.ಆರ್.ತಾಲೂಕಿನ ಅರ್ಕೇಶ್ವರ ದೇವಾಲಯದ ಬಳಿ ನಡೆದಿದೆ.
ಯಾಸಿನ್(28), ಫಾತಿಮಾ(33), ಹುಮಾನುನ್(24), ಅಲೀಂ(13), ನೇಹಾನ್ (19) ಮತ್ತು ಓರ್ವ ಬಾಲಕ ಸಾವನ್ನಪ್ಪಿದ್ದಾರೆ.
ತೀವ್ರ ಅಸ್ವಸ್ಥಗೊಂಡ ಇಬ್ಬರನ್ನು ಅಗ್ನಿಶಾಮಕದ ದಳ ಸಿಬ್ಬಂದಿ ರಕ್ಷಿಸಿದ್ದು, ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್‌ಪಿಗಳಾದ ನಾಗೇಶ್, ಮಲ್ಲಿಕ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.






