ಇತರೆ

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಸ್ನೇಹಿತರು ನೀರು ಪಾಲು 

Views: 49

ಕನ್ನಡ ಕರಾವಳಿ ಸುದ್ದಿ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.

ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಮೃತ ಯುವಕರು.

ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೊಬ್ಬ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರು ಬಲಮುರಿ ಪ್ರವಾಸಿ ತಾಣಕ್ಕೆ ಹೋಗಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಈಜಲು ಹೋಗಿ ಈ ದುರಂತ ಸಂಭವಿಸಿದೆ.

ತಕ್ಷಣ ವಿಕಾಸ್ ಸ್ಥಳೀಯರ ನೆರವಿನೊಂದಿಗೆ ಕೆ.ಆರ್ ಸಾಗರ ಪೊಲೀಸ್ ಠಾಣೆ ಮಾಹಿತಿ ನೀಡಿದ್ದಾರೆ. ಇಬ್ಬರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!