ಕಿವಿ ಚುಚ್ಚುವ ಮುನ್ನ ವೈದ್ಯರು ಕೊಟ್ಟ ಅನಸ್ತೇಶಿಯಾದಿಂದ ಐದು ವರ್ಷದ ಮಗು ಸಾವು

Views: 173
ಕನ್ನಡ ಕರಾವಳಿ ಸುದ್ದಿ: ಐದು ತಿಂಗಳ ಮಗುವಿನ ಸಾವಿನ ಕಾರಣ 6 ತಿಂಗಳ ಬಳಿಕ ರಿವೀಲ್ ಆಗಿದೆ. ಕಿವಿ ಚುಚ್ಚುವ ಮುನ್ನ ವೈದ್ಯರು ಕೊಟ್ಟ ಅನಸ್ತೇಶಿಯಾದಿಂದ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಎಡವಟ್ಟಿಗೆ ಐದು ತಿಂಗಳ ಗಂಡು ಮಗುವೊಂದು ಸಾವನ್ನಪ್ಪಿದೆ. ಹಂಗಳ ಗ್ರಾಮದ ಆನಂದ್, ಮಾನಸ ದಂಪತಿ ಪುತ್ರ ಪ್ರಖ್ಯಾತ್ ಎಂಬ 5 ತಿಂಗಳ ಮಗು ಮೃತಪಟ್ಟಿದೆ.
ಕಳೆದ 6 ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ತನಿಖೆಯ ವರದಿಯಲ್ಲಿ ಕಿವಿ ಚುಚ್ಚುವ ಮುನ್ನ ವೈದ್ಯರು ಕೊಟ್ಟ ಅನಸ್ತೇಶಿಯಾದಿಂದ ಮಗು ಮೃತಪಟ್ಟಿದೆ ಎಂಬುದು ವರದಿಯಾಗಿದೆ. ಪೋಷಕರು ಕಿವಿ ಚುಚ್ಚಲು ತಮ್ಮ ಮಗುವನ್ನು ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆಗ ವೈದ್ಯರು ನೋವಾಗಬಾರದೆಂದು ಮಗುವಿನ 2 ಕಿವಿಗಳಿಗೆ ಅರಿವಳಿಕೆ ನೀಡಿದ್ದಾರೆ, ನಂತರ ಮಗುವಿನ ಬಾಯಲ್ಲಿ ನೊರೆ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಮಗು ಮೃತಪಟ್ಟಿದೆ ಎಂದು ವೈದ್ಯರು ಧೃಡಪಡಿಸಿದ್ದರು.
6 ತಿಂಗಳ ಬಳಿಕ ಮಗುವಿನ ಮರಣೋತ್ತರ ಪರೀಕ್ಷೆ ಸಿಕ್ಕಿದ್ದು, ವರದಿಯಲ್ಲಿ ಮಗು ಅನಸ್ತೇಶಿಯಾದಿಂದ ಮೃತಪಟ್ಟಿರುವುದು ಧೃಡವಾಗಿದೆ. ಅನಸ್ತೇಶಿಯಾ ನೀಡಿದ್ದಕ್ಕೆ ಮಗುವಿನ ಶ್ವಾಸಕೋಶ ಹಾಗೂ ಮೆದುಳಿನಲ್ಲಿ ರಕ್ತ ಹೆಪ್ಪು ಗಟ್ಟಿದ್ದು, ಮಗು ಮೃತಪಟ್ಟಿದೆ ಎಂಬುದು ಧೃಡವಾಗಿದೆ.