ಕರಾವಳಿ

ಕುಂದಾಪುರ:ಅಂಪಾರು ಮನೆಗೆ ನುಗ್ಗಿ ಸೊತ್ತು ಕಳ್ಳತನಗೈದ ಬಾಲಕ ವಶಕ್ಕೆ

Views: 340

ಕುಂದಾಪುರ:ಶಂಕರನಾರಾಯಣದ ಅಂಪಾರು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ನುಗ್ಗಿ ಸೊತ್ತು ಕಳ್ಳತನ ಮಾಡಿದ್ದ ಬಾಲಕನನ್ನು ಬಾಲ ನ್ಯಾಯ ಮಂಡಳಿಯ ವಶಕ್ಕೆ ಒಪ್ಪಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಶಂಕರನಾರಾಯಣ ಠಾಣೆ ಪಿ.ಎಸ್.ಐ ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಹಾಗೂ ಸಿಬ್ಬಂದಿ ಈ ಕಳ್ಳತನ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾಗಿದ್ದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಆತನಿಂದ ಮೊಬೈಲ್ ಪೋನ್‌ಗಳು, ನಗದು ರೂ.2500, ಕಿವಿ ಓಲೆ, ಉಂಗುರ ಸಹಿತ ಒಟ್ಟು ರೂ. 87,890 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ.

Related Articles

Back to top button
error: Content is protected !!