ಕುಂದಾಪುರ:ಆಜ್ರಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ: ಇಬ್ಬರು ಆರೋಪಿಗಳ ಸೆರೆ
Views: 86
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 20ರಂದು ಬೆಳಿಗ್ಗೆ ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಹೆಚ್.ಡಿ. ಕುಲಕರ್ಣಿ (ಪೊಲೀಸ್ ಉಪಾಧೀಕ್ಷಕರು, ಕುಂದಾಪುರ ಉಪವಿಭಾಗ) ಹಾಗೂ ಸಂತೋಷ್ ಎ. ಕಾಯ್ಕಣಿ (ಪೊಲೀಸ್ ವೃತ್ತ ನಿರೀಕ್ಷಕರು) ಅವರ ಮಾರ್ಗದರ್ಶನದಲ್ಲಿ, ಶಂಕರನಾರಾಯಣ ಠಾಣೆಯ ಪಿ.ಎಸ್.ಐ ಐ.ಆರ್. ಗಡ್ಡೇಕರ್, ಪಿ.ಎಸ್.ಐ ಅಕ್ಷಯ ಕುಮಾರಿ ಎಸ್.ಎನ್. ಹಾಗೂ ಸಿಬ್ಬಂದಿಗಳಾದ ಸಚಿನ್ ಶೆಟ್ಟಿ, ಜಯರಾಮ ನಾಯ್ಕ್, ಚೇತನ್ ಕುಮಾರ್, ನವೀನ್ ನಾಯ್ಕ್ ಮತ್ತು ಕುಂದಾಪುರ ಗ್ರಾಮಾಂತರ ಠಾಣೆಯ ಮೌನೇಶ್ ನಾಯ್ಕ್ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ದಿನೇಶ್ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಬಂಧಿತ ಆರೋಪಿಗಳನ್ನು ಸಂದೀಪ್ ಆಚಾರಿ (28), ಮಠದಮನೆ, ಎಳಬೇರು, ಕಮಲಶಿಲೆ ಗ್ರಾಮ, ಮುತ್ತಪ್ಪ ಶರಣಪ್ಪ ವಾಲಿಕರ್ (40), ಬನಹಟ್ಟಿ ಗ್ರಾಮ, ಕುಷ್ಟಗಿ,ಎಂದು ಗುರುತಿಸಲಾಗಿದೆ. ಇವರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಬಂಧಿಸಲಾಗಿದೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್, 3 ಮೊಬೈಲ್ ಫೋನ್‌ಗಳು ಹಾಗೂ ಕಳವುಗೊಂಡ ಉಮಾಮಹೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯನ್ನು ವಶಪಡಿಸಿಕೊಂಡಿದ್ದು, ಒಟ್ಟು ಅಂದಾಜು ಮೌಲ್ಯ ರೂ.1,50,000/- ಎಂದು ತಿಳಿದುಬಂದಿದೆ.ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.






