ಇತರೆ
ಕುಂದಾಪುರ:ಕೊಳೆತ ಸ್ಥಿತಿಯಲ್ಲಿ ಮನೆಯೊಳಗೆ ಶವ ಪತ್ತೆ

Views: 302
ಕುಂದಾಪುರ: ಇಲ್ಲಿನ ಪೇಟೆಯ ಚಿಕ್ಕನ್ ಸಾಲು ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಬ್ರಹ್ಮಾವರದ ಉಪ್ಪೂರು ನಿವಾಸಿ ಸಂತೋಷ್ ಆಚಾರ್ಯ (45) ಮೃತಪಟ್ಟವರು.
ಅವರು ಕಳೆದ 25 ವರ್ಷಗಳಿಂದ ಕುಂದಾಪುರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ಶುಕ್ರವಾರ ನಾಗರ ಪಂಚಮಿ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು ಸಹೋದರ ಸುರೇಶ್ ಆಚಾರ್ಯರವರು ಫೋನ್ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಳಿಕ ಅವರು ಅಣ್ಣನ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಮನೆಯ ಒಳಗಿನಿಂದ ದುರ್ವಾಸನೆ ಬರುತ್ತಿದೆ ಎಂದು ತಿಳಿಸಿದ್ದು, ಆಗ ಸಂತೋಷ್ ಆಚಾರ್ಯ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ.
ಅವಿವಾಹಿತ ರಾಗಿದ್ದ ಅವರು ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.






