ಆರ್ಥಿಕ
ಕುಂದಾಪುರ:ಕೋಣಿ ಸಮೀಪ ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ಯತ್ನ!

Views: 272
ಕುಂದಾಪುರ: ಇಲ್ಲಿಗೆ ಸಮೀಪ ಕೋಣಿ ಎಂಬಲ್ಲಿ ಬ್ಯಾಂಕ್ ಒಂದರಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಎಟಿಎಂಗೆ ನುಗ್ಗಿ ಯಂತ್ರ ತೆರೆಯಲು ಯತ್ನಿಸುತ್ತಿರುವಾಗ ಹೈದರಾಬಾದ್ ನಿಂದ ಸೆಕ್ಯೂರಿಟಿ ಸಂಸ್ಥೆಯವರು ಎಚ್ಚರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಕಳ್ಳರು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ.
ಕೋಣಿ ಸಮೀಪದ ಬ್ಯಾಂಕಿನ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಇಬ್ಬರು ವ್ಯಕ್ತಿಗಳು ಜಾಲಾಡಿದ್ದಾರೆ. ಲಾಕರ್ ತೆರೆಯುವ ಯತ್ನ ಫಲ ನೀಡಲಿಲ್ಲ, ಕೊನೆಗೆ ಅದರ ಪಕ್ಕದಲ್ಲಿರುವ ಎಟಿಎಂಗೆ ಪ್ರವೇಶಿಸಿದ್ದಾರೆ. ಎಟಿಎಂ ಯಂತ್ರವನ್ನು ತಡೆಯಲು ಯತ್ನಿಸಿದಾಗ ಸೈರನ್ ಮೊಳಗಿದೆ.
ಎಟಿಎಂ ನಿರ್ವಹಿಸುವ ಸಂಸ್ಥೆಯ ಭದ್ರತಾ ನಿಗಾ ವಹಿಸುವವರು ಹೈದರಾಬಾದಿನಲ್ಲಿ ಸಿಸಿಟಿವಿ ಮಾನಿಟರಿಂಗ್ ಮಾಡುತ್ತಿದ್ದು, ಅವರ ಗಮನಕ್ಕೆ ಬಂದ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಎಸ್ಐ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.