ಇತರೆ
ಕುಂದಾಪುರ:ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿ ಅಡ್ಡ ಬಂದು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಸಾವು
Views: 42
ಕನ್ನಡ ಕರಾವಳಿ ಸುದ್ದಿ: ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿ ಅಡ್ಡಬಂದಾಗ ಸ್ಕೂಟರ್ ಅನ್ನು ನಿಯಂತ್ರಿಸಲಾಗದೆ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಆ. 29 ರಂದು ಸಂಭವಿಸಿದೆ.
ಮರವಂತೆ ನಿವಾಸಿ ರಾಘವೇಂದ್ರ (43) ಮೃತಪಟ್ಟವರು. ಅವರು ಆ. 28 ರ ರಾತ್ರಿ ಬೈಂದೂರು – ಕುಂದಾಪುರ ರಾ. ಹೆದ್ದಾರಿಯಲ್ಲಿ ಕುಂದಾಪುರ ಕಡೆಗೆ ತೆರಳುತ್ತಿದ್ದಾಗ ತಲ್ಲೂರು ಬಳಿ ಒಂದು ನಾಯಿ ಅಡ್ಡ ಬಂದಾಗ ಸ್ಕೂಟರ್‌ನ್ನು ನಿಯಂತ್ರಿಸಲು ಒಮ್ಮೆಲೆ ಬ್ರೇಕ್ ಹಾಕಿದ್ದಾರೆ. ಪರಿಣಾಮ ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆ, ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆ. 29 ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ದೀಪಕ್ ಕುಮಾರ್ ಅವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






