ಕ್ರೀಡೆ

ಕುಂದಾಪುರ:ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ; ವಕ್ವಾಡಿ ಬಾಲಕೃಷ್ಣ ಶೆಟ್ಟಿ

Views: 85

ಕುಂದಾಪುರ: ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ವಕ್ವಾಡಿ ಬಾಲಕೃಷ್ಣ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಇವರು ಕಾಳಾವರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 20 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರು ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿಯಾಗಿ, ವಕ್ವಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾಗಿ,ವಕ್ವಾಡಿ ಯುವಕ ಮಂಡಲದ ಕಾರ್ಯದರ್ಶಿಯಾಗಿ, ತೆಕ್ಕಟ್ಟೆ ಲಯನ್ಸ್ ಕ್ಲಬ್ ಸದಸ್ಯರಾಗಿ, ವಕ್ವಾಡಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ ಕ್ರೀಡಾ ಕಾರ್ಯದರ್ಶಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದರು.

ಇವರು ಉತ್ತಮ ಕ್ರೀಡಾ ತರಬೇತುದಾರರಾಗಿ ಶಾಲಾ ವಿದ್ಯಾರ್ಥಿಗಳನ್ನು ವಲಯ, ಜಿಲ್ಲೆ, ವಿಭಾಗ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳಿಸಿದ್ದಾರೆ.

Related Articles

Back to top button
error: Content is protected !!