ಇತರೆ

ಕುಂದಾಪುರದಲ್ಲಿ ಗಂಗೊಳ್ಳಿ ಮಹಿಳೆ ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

Views: 143

ಕನ್ನಡ ಕರಾವಳಿ ಸುದ್ದಿ:ಕುಂದಾಪುರದಲ್ಲಿ ಗಂಗೊಳ್ಳಿ ಮಹಿಳೆಯೊಬ್ಬರು ಬಸ್‌ನಲ್ಲಿ ಹೃದಯಾಘಾತದಿಂದ ಸಾವನಪ್ಪಿದ ಘಟನೆ ನಡೆದಿದೆ.

ಗಂಗೊಳ್ಳಿ ಬಂದರು ರಸ್ತೆ ದೊಡ್ಡಹಿತ್ತು ಪದ್ಮಾವತಿ (67) ಮೃತಪಟ್ಟವರು.

ಇವರು ಮೀನು ವ್ಯಾಪಾರ ಮಾಡಿಕೊಂಡಿದ್ದು, ಸುಮಾರು 10 ವರ್ಷಗಳ ಹಿಂದೆ ಹೃದಯಕ್ಕೆ ಸಂಬಂಧಿಸಿದ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು ಎಂದು ಹೇಳಲಾಗಿದೆ.

ಗಂಗೊಳ್ಳಿಯಿಂದ ಪ್ರತೀ ದಿನ ಮೀನು ತೆಗೆದುಕೊಂಡು ಬರುವಾಗ ಕುಂದಾಪುರದ ಶಾಸ್ತ್ರಿ ಪಾರ್ಕ್‌ನ ಹತ್ತಿರ ಬಸ್ಸಿನಲ್ಲಿ ಕುಸಿದು ಬಿದ್ದರು.ಕೂಡಲೇ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಸರಕಾರಿ ಆಸ್ಪತ್ರೆಗೆ ಹೋದರು.ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!