ಸಾಮಾಜಿಕ

ಕುಂದಾಪುರದ ಆರ್.ಎನ್.ಶೆಟ್ಟಿ‌ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ‌ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ

Views: 43

ಕನ್ನಡ ಕರಾವಳಿ ಸುದ್ದಿ:” ಯಾವುದೇ ವಿಪತ್ತು ಎದುರಾದಲ್ಲಿ‌ ರೆಡ್ ಕ್ರಾಸ್ ಸಂಸ್ಥೆಯ ಸ್ವಯಂ‌ಸೇವಕರು ಸ್ವಯಂಸ್ಪೂರ್ತಿಯಿಂದ ನಿಷ್ಪಕ್ಷಪಾತದಿಂದ ತಾರತಮ್ಯವಿಲ್ಲದೇ ಪ್ರಪಂಚದಾದ್ಯಂತ ಅಗತ್ಯವಿರುವ ಸೇವೆ ನೀಡುತ್ತಾರೆ. ವಿದ್ಯಾರ್ಥಿಗಳು ತಮ್ಮ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೇ ಸಹವರ್ತಿಗಳ ಆರೋಗ್ಯ ಕಾಪಾಡುವ ಜವಾಬ್ದಾರಿಯನ್ನು ಕಲಿಯಬೇಕು ” ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ ಘಟಕದ ಸಭಾಪತಿ ಶ್ರೀ ಜಯಕರ‌‌ ಶೆಟ್ಟಿಯವರು ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಕರೆ ನೀಡಿದರು.

ಕುಂದಾಪುರ ತಾಲೂಕು ವಲಯದ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶ್ರೀ ದಿನಕರ್ ಆರ್. ಶೆಟ್ಟಿಯವರು ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಪ್ರತಿಜ್ಞಾವಿಧಿ ಬೋಧಿಸಿ, ವಿದ್ಯಾರ್ಥಿಗಳು ಸಮಾಜದ ಋಣವನ್ನು ತೀರಿಸುವಲ್ಲಿ ತಮ್ಮಿಂದಾದ ಪ್ರಯತ್ನವನ್ನು ಮಾಡಬೇಕೆಂದು ತಿಳಿಸಿದರು.

ಇಂಗ್ಲೀಷ್ ಉಪನ್ಯಾಸಕಿ‌ ರೂಪಾ ಜಿ.ಪಾಲಂಕರ್ ರವರು ಅತಿಥಿಗಳನ್ನು‌ ಸ್ವಾಗತಿಸಿದರು. ವಿದ್ಯಾರ್ಥಿನಿ ಶರಧಿ ಪ್ರಾರ್ಥನೆ ಹಾಡಿದರು.

ಇಂಗ್ಲೀಷ್ ಉಪನ್ಯಾಸಕಿ ಸುಮತಿ‌‌ ಶೆಣೈಯವರು ಕಾರ್ಯಕ್ರಮ ನಿರ್ವಹಿಸಿದರು.

Related Articles

Back to top button