ಕನ್ನಡ ಕರಾವಳಿ ಸುದ್ದಿ: ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ ಪ್ರಯುಕ್ತ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಇದರ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನವೀನ ಕುಮಾರ ಶೆಟ್ಟಿಯವರು ಸ್ಪರ್ಧಾ ಕಾರ್ಯಕ್ರಮಗಳನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಕೆಂಪೇಗೌಡರ ದೂರದೃಷ್ಟಿಯ ಕೊಡುಗೆಗಳನ್ನು ಸ್ಮರಿಸಿ ಶ್ಲಾಘಿಸಿದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಯವರು ಕಾರ್ಯಕ್ರಮ ನಿರ್ವಹಿಸಿದರು.