ಶಿಕ್ಷಣ
ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Views: 52
ಕನ್ನಡ ಕರಾವಳಿ ಸುದ್ದಿ: ಆಷಾಢ ಹುಣ್ಣಿಮೆಯ ಪವಿತ್ರ ದಿನದಂದು ಆಚರಿಸಲ್ಪಡುವ ಗುರು ಪೂರ್ಣಿಮಾ ಕಾರ್ಯಕ್ರಮದಲ್ಲಿ ಆರ್.ಎನ್.ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಆರತಿ ಬೆಳಗಿಸಿ ಕಾಲಿಗೆ ನಮಸ್ಕರಿಸುವ ಮೂಲಕ ಶುಭ ಸಂದರ್ಭವನ್ನು ಆಚರಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರು ಭವಿಷ್ಯದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಗುರು ಸ್ಥಾನದಲ್ಲಿರಬೇಕಾದ ಅವಕಾಶ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಡಿ.ಬಿ.ಕೃಷ್ಣಮೂರ್ತಿಯವರು ಗುರು ಪೂರ್ಣಿಮೆಯ ವಿಶೇಷತೆಯನ್ನು ತಿಳಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈಯವರು ಕಾರ್ಯಕ್ರಮ ನಿರ್ವಹಿಸಿದರು.