ಇತರೆ

ಕುಂದಾಪುರ:ನೆಲ್ಲಿಕಟ್ಟೆ ಬಳಿ ಬೈಕ್‌ ಡಿಕ್ಕಿ ಹೊಡೆದು ಸೈಕಲ್ ಸವಾರ ಸಾವು 

Views: 137

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ನೆಲ್ಲಿಕಟ್ಟೆಯ ಬಳಿ ಬೈಕ್‌ ಡಿಕ್ಕಿ ಹೊಡೆದು ಸೈಕಲ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರು  ಅಂಪಾರು ಗ್ರಾಮದ ಕೊರಗ(77)

ಕೊರಗ ಅವರು ತನ್ನ ಮಗನ ಮನೆಯಾದ ನೆಲ್ಲಿಕಟ್ಟೆಯಿಂದ ಅಂಪಾರಿನ ಮನೆ ಕಡೆಗೆ ತನ್ನ ಸೈಕಲ್‌ನಲ್ಲಿ ಹೋಗುತ್ತಿರುವಾಗ ನೆಲ್ಲಿಕಟ್ಟೆಯ ಬಳಿ ಎದುರು ಕಡೆಯಿಂದ ಅತೀ ವೇಗವಾಗಿ ಬಂದ ಬೈಕ್‌ ಸವಾರ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭದಲ್ಲಿ ಇಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ  ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೊರಗ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಕೊರಗ ಅವರು ಮೃತಪಟ್ಟಿದ್ದಾರೆ.

ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!