ಇತರೆ
ಕುಂದಾಪುರ:ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು
Views: 62
ಕನ್ನಡ ಕರಾವಳಿ ಸುದ್ದಿ: ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.
ಕುಂದಾಪುರಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಎದುರಿನ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು ಅರುಣ್ (17) ಸಾವನ್ನಪ್ಪಿದ ಯುವಕ.
ಎ.10 ರ ಬೆಳಗ್ಗೆ ಬೈಕ್ ಸ್ಕಿಡ್ ಆಗಿ ಬಿದ್ದಾಗ ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ, ಬಳಿಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಎ. 11 ರ ನಸುಕಿನ ಜಾವ ಪರೀಕ್ಷಿಸಿದ ವೈದ್ಯರು ಗಾಯಾಳು ಸಾವನ್ನಪ್ಪಿರುವುದಾಗಿ ತಿಳಿಸಿದರು. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






