ಇತರೆ
ಕುಂದಾಪುರ:ಹೊಸಾಡು ಕಡುಬಿನ ಕೆರೆಯಲ್ಲಿ ಮುಳುಗಿ ಬಾಲಕಿಯರಿಬ್ಬರು ದುರ್ಮರಣ
Views: 72
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಡುಬಿನ ಕೆರೆಯಲ್ಲಿ ಮುಳುಗಿ ಬಾಲಕಿಯರಿಬ್ಬರು ಸಾವನ್ನಪ್ಪಿದ್ದಾರೆ.
ಮೃತಪಟ್ಟ ಬಾಲಕಿಯರನ್ನು ಮುಳ್ಳಿಕಟ್ಟೆ ಪ್ರದೇಶದಲ್ಲಿ ವಾಸಿಸುವ ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ.
ಬಾಲಕಿಯರಿಬ್ಬರು ಬಟ್ಟೆ ತೊಳೆಯಲು ಮತ್ತು ಸ್ನಾನ ಮಾಡಲು ಕೆರೆಗೆ ಹೋದಾಗ ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






