ಇತರೆ

ಕುಂದಾಪುರ: ಅಂಕದಕಟ್ಟೆಯಲ್ಲಿ ರಸ್ತೆ ಡಿವೈಡರ್‌ಗೆ ಸ್ಕೂಟರ್ ಡಿಕ್ಕಿ, ಸವಾರ ಗಂಭೀರ

Views: 117

ಕನ್ನಡ ಕರಾವಳಿ ಸುದ್ದಿ: ಸ್ಕೂಟರ್ ಸವಾರರೊಬ್ಬರು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಹಂಗಳೂರು ಗ್ರಾಮದ ಅಂಕದಕಟ್ಟೆ ಬಳಿ ಸಂಭವಿಸಿದೆ.

ಮಣೂರು ಗ್ರಾಮದ ಕಂಬಳಗದ್ದೆಬೆಟ್ಟು ನಿವಾಸಿ ರಾಜು ಎಂ.ಎಸ್‌. ಗಾಯಗೊಂಡವರು.

ಇವರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕುಂದಾಪುರ ಕಡೆಯಿಂದ ಕೋಟೇಶ್ವರ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಹಂಗಳೂರಿನ ಅಂಕದಕಟ್ಟೆ ಬಳಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿದ್ದಾರೆ. ಈ ವೇಳೆ ಸ್ಥಳೀಯರು ಗಾಯಾಳುವನ್ನು ಉಪಚರಿಸಿದ್ದರು. ವೈದ್ಯರ ಸಲಹೆಯಂತೆ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!