ಇತರೆ

ಕುಂದಾಪುರ: ಅಡಿಕೆ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

Views: 0

ಕನ್ನಡ ಕರಾವಳಿ ಸುದ್ದಿ: ಅಡಿಕೆ ಮರದ ತಲೆ ಕತ್ತರಿಸುವ ವೇಳೆ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಉಳ್ತೂರು ಗ್ರಾಮದ ಹಲ್ಲೂರಿನಲ್ಲಿ ಸಂಭವಿಸಿದೆ.

ಹಲ್ಲೂರಿನ ನಿವಾಸಿ ಭುಜಂಗ ಶೆಟ್ಟಿ (56) ಮೃತಪಟ್ಟವರು.

ಅವರು ಆ.8ರಂದು ಮನೆಯ ಜಾಗದಲ್ಲಿದ್ದ ಅಡಿಕೆ ಮರ ಹತ್ತಿ ಅದರ ತಲೆಯನ್ನು ಕತ್ತರಿಸುತ್ತಿದ್ದ ವೇಳೆ ಬಿದ್ದಿದ್ದರು. ಪರಿಣಾಮ ತಲೆ ಹಾಗೂ ಬೆನ್ನಿಗೆ ತೀವ್ರ ಗಾಯಗಳಾಗಿದ್ದವು.

ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ.20ರಂದು ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಹಲ್ತೂರಿನ ಮನೆಗೆ ಕರೆತರಲಾಗಿತ್ತು. ಆದರೆ ಸಂಜೆ ಮನೆಯಲ್ಲಿ ಮೃತಪಟ್ಟಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!