ಇತರೆ

ಕುಂದಾಪುರ: ಅಸ್ವಸ್ಥ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

Views: 69

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಶಾಸ್ತ್ರಿ ಸರ್ಕಲ್ ಫೈಓವರ್ ಕೆಳಭಾಗದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.

ಮೇ 30 ರಂದು ಮಧ್ಯಾಹ್ನ ಫೈಓವರ್ ಕೆಳಗೆ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಬಿದ್ದಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದಿತ್ತು. ಸ್ಥಳಕ್ಕೆ ತೆರಳಿದ ವೇಳೆ ಸುಮಾರು 50 ವರ್ಷ ಪ್ರಾಯದ ವ್ಯಕ್ತಿ ಮಾತನಾಡುವ ಸ್ಥಿತಿಯಲ್ಲಿ ಇಲ್ಲದೇ ಕೈಕಾಲುಗಳನ್ನು ಅಲ್ಲಾಡಿಸುತ್ತಿದ್ದರು. ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮೇ 31ರಂದು ಅವರು ಮೃತಪಟ್ಟಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ದೇಹ ಪತ್ತೆಗಾಗಿ ಮನವಿ: ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ  5’5′ ಅಡಿ ಎತ್ತರ, ಎಣ್ಣೆ ಕಪ್ಪು, ಮೈ ಬಣ್ಣ ಕಪ್ಪು ಬಿಳಿ ಮಿಶ್ರಿತ ತಲೆ ಕೂದಲು ಕುರುಚಲು ಗಡ್ಡ ಮೀಸೆ ಧರಿಸಿದ್ದ ಬಟ್ಟೆ ಬೂದು ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಮೇಲ್ಕಂಡ ವ್ಯಕ್ತಿಯ ರಕ್ತ ಸಂಬಂಧಿಕರು ವಾರೀಸುದಾರರು ಯಾರಾದರೂ ಪತ್ತೆಯಾದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕುಂದಾಪುರ ಪೊಲೀಸ್ ಠಾಣೆ: 08254-230338 ಡಿ.ವೈ.ಎಸ್.ಪಿ ಕುಂದಾಪುರ ವಿಭಾಗ:9480805422 ಪಿ.ಎಸ್, ಐ ಕುಂದಾಪುರ ಠಾಣೆ :8277988957

Related Articles

Back to top button
error: Content is protected !!