ಕುಂದಾಪುರ: ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಮಾದಕ ದ್ರವ್ಯ ವ್ಯಸನಿಗಳು ದುಶ್ಚಟಕ್ಕೊಳಗಾದ ಎಷ್ಟೋ ವರ್ಷಗಳ ನಂತರವೂ ಸುಭದ್ರ ಜೀವನವನ್ನು ಸಡೆಸುವುದು ಕಷ್ಟವಾಗುವುದರಿಂದ ಪ್ರಾರಂಭದಲ್ಲೇ ದುಶ್ಚಟಗಳಿಂದಾಗುವ ಹಾನಿಗಳ ಬಗ್ಗೆ ಎಚ್ಚರವಹಿಸಬೇಕು.

Views: 7
ಕುಂದಾಪುರ : ಡ್ರಗ್ಸ್ ಸೇವನೆಯಂಥ ದುಶ್ಚಟವು ವ್ಯಕ್ತಿಯ ಕೌಟುಂಬಿಕ ಮತ್ತು ಸಾಮಾಜಿಕ ವಲಯಗಳಲ್ಲೂ ಮಾರಕ ಪರಿಣಾಮ ಬೀರುತ್ತದೆ. ಮಾದಕ ದ್ರವ್ಯ ವ್ಯಸನಿಗಳು ದುಶ್ಚಟಕ್ಕೊಳಗಾದ ಎಷ್ಟೋ ವರ್ಷಗಳ ನಂತರವೂ ಸುಭದ್ರ ಜೀವನವನ್ನು ಸಡೆಸುವುದು ಕಷ್ಟವಾಗುವುದರಿಂದ ಪ್ರಾರಂಭದಲ್ಲೇ ದುಶ್ಚಟಗಳಿಂದಾಗುವ ಹಾನಿಗಳ ಬಗ್ಗೆ ಎಚ್ಚರವಹಿಸಬೇಕು ” ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿ ಶ್ರೀ ವಿನಯ್ ಕೊರ್ಲಳ್ಳಿ ಹೇಳಿದರು.
ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ- 2024, ಇದರ ಪ್ರಯುಕ್ತ ಕುಂದಾಪುರ ಪೊಲೀಸ್ ಠಾಣೆಯ ಸಹಯೋಗದಲ್ಲಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ನಡೆದ ಮಾಹಿತಿ ಉಪನ್ಯಾಸ ನೀಡುತ್ತಾ ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಇಂದಿನ ಯುವ ಪೀಳಿಗೆಯು ಎಲ್ಲೆಂದರಲ್ಲಿ ಲಭ್ಯವಿರುವ ವಿವಿಧ ಬಗೆಯ ಮಾದಕ ದ್ರವ್ಯಗಳಿಂದ ತಮ್ಮನ್ನು ತಾವು ದೂರವಿರಿಸಿಕೊಳ್ಳುವಲ್ಲಿ ಇಂಥ ಅರಿವು ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯ ಪಟ್ಟರು. ಕುಂದಾಪುರ ಪೊಲೀಸ್ ಠಾಣೆಯ ಶ್ರೀ ಅವಿನಾಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಅರುಣಾ ಹೊಳ್ಳ ಕಾರ್ಯಕ್ರಮ ನಿರ್ವಹಿಸಿದರು.