ಕುಂದಾಪುರ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Views: 466
ಕನ್ನಡ ಕರಾವಳಿ ಸುದ್ದಿ: “ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ಕ್ರಷ್ಟ ದರ್ಜೆ ಪಡೆದ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಇಂದು ನಡೆಯುತ್ತಿರುವ ಹಲವು ರೀತಿಯ ಪ್ರಚಾರ ಮತ್ತು ಸ್ಪರ್ಧಾತ್ಮಕ ವಿಧಾನಗಳನ್ನೆಲ್ಲ ಅರಿತುಕೊಂಡು, ಮುಂದಿನ ವ್ಯಾಸಂಗಕ್ಕೆ ತೊಡಗಿಸಿಕೊಂಡು ಯಶಸ್ಸು ಪಡೆಯಬೇಕು” ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ ನಕ್ಕತ್ತಾಯ ರವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾಪೂರ್ವಕವಾಗಿ ಆಯೋಜಿಸಿದ ‘ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನವೀನ ಕುಮಾರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕುಂದಾಪುರ ಎಜುಕೇಶನ್ ಸೊಸೈಟಿಯ ಜೊತೆ ಕಾರ್ಯದರ್ಶಿ ಶ್ರೀ ಸುಧಾಕರ್ ಶೆಟ್ಟಿ ಭಾಂಡ್ಯ ಮತ್ತು ಉಪ ಪ್ರಾಂಶುಪಾಲರಾದ ಶ್ರೀ ಪ್ರೀತೇಶ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ವನಿತಾ ಜೆ.ಶೆಟ್ಟಿ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸಂದೀಪ್ ಪೂಜಾರಿ, ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಈಶ್ವರ್, ರಸಾಯನ ಶಾಸ್ತ್ರ ಉಪನ್ಯಾಸಕಿ ಅಕ್ಷತಾ ಶೆಟ್ಟಿ, ಭೌತಶಾಸ್ತ್ರ ಉಪನ್ಯಾಸಕರಾದ ರವಿಕುಮಾರ್ ಶೆಟ್ಟಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ದೀಪಾ ಶೆಟ್ಟಿಯವರು ಅಬಿನಂದನಾ ಪಟ್ಟಿಗಳನ್ನು ವಾಚಿಸಿದರು.
ಇಂಗ್ಲೀಷ್ ಭಾಷಾ ಉಪನ್ಯಾಸಕಿ ರೂಪಾ ಜಿ. ಪಾಲೆಂಕರ್ ರವರು ಧನ್ಯವಾದ ಸಲ್ಲಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆಯಾದ ಜ್ಯೋತಿಯವರು ಕಾರ್ಯಕ್ರಮ ನಿರೂಪಿಸಿದರು.







