ಶಿಕ್ಷಣ
ಕುಂದಾಪುರ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Views: 51
ಕನ್ನಡ ಕರಾವಳಿ ಸುದ್ದಿ: ಕುಂದಾಪುರದ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಯುನಿವರ್ಸಲ್ ಸ್ಕೂಲ್ ಆಫ್ ಎಡ್ಮಿನಿಸ್ಟ್ರೇಶನ್ ಸಂಸ್ಥೆಯ ಉಪನ್ಯಾಸಕರಾದ ಶ್ರೀ ಪ್ರಭುಲಿಂಗ ರವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಆಡಳಿತಾತ್ಮಕ ಕಛೇರಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವ ಬಗ್ಗೆ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ನವೀನ ಕುಮಾರ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿ ಧನ್ಯವಾದ ಸಲ್ಲಿಸಿದರು.






