ಶಿಕ್ಷಣ

ಕುಂದಾಪುರ ಆರ್ ಎನ್ ಶೆಟ್ಟಿ ಸಂಯುಕ್ತ ಪದವಿಪೂರ್ವ ಕಾಲೇಜು: ಶೇ.99.1 ಫಲಿತಾಂಶ

Views: 346

ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರದ ಆರ್ ಎನ್ ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜು ಶೇ.99.1 ಫಲಿತಾಂಶ ದಾಖಲಿಸಿದೆ. 

ಪರೀಕ್ಷೆಗೆ ಹಾಜರಾದ 328 ವಿದ್ಯಾರ್ಥಿಗಳಲ್ಲಿ 325 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 140 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 161 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ವಿಜ್ಞಾನ ವಿಭಾಗ:  ಸ್ನೇಹ 592 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 7ನೇ ಸ್ಥಾನಿ ಯಾಗಿ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಹಾಗೂ ಕಾಜಿ ಮಹಮ್ಮದ್ ರಿಯಾದ್ 590 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ಸ್ಥಾನಿಯಾಗಿ ಕಾಲೇಜಿಗೆ ದ್ವಿತೀಯ ಸ್ಥಾನಗಳಿಸಿದ್ದಾರೆ. ಕೌಶಿಕ್ ಎ ಶೆಟ್ಟಿ 585 ಅಂಕಗಳನ್ನು ಗಳಿಸಿ ಕಾಲೇಜಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. 

ವಾಣಿಜ್ಯ ವಿಭಾಗ: ಕೃತಿ ಕೆ ದೇವಾಡಿಗ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 8ನೇ ಸ್ಥಾನಿಯಾಗಿ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸಾನ್ವಿ ಜಿ ಪೂಜಾರಿ 589 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 12ನೇ ಸ್ಥಾನಿಯಾಗಿ ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಶ್ರೀರಕ್ಷಾ 586 ಅಂಕಗಳನ್ನು ಗಳಿಸಿ ತೃತೀಯ ಸ್ಥಾನಿಯಾಗಿದ್ದಾರೆ.

ಅಭಿನಂದನೆ: ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ ಕುಂದಾಪುರ ಎಜುಕೇಶನ್ ಸೊಸೈಟಿಯ ಸಂಚಾಲಕರಾದ ಶ್ರೀ ಬಿ ಎಂ ಸುಕುಮಾರ್ ಶೆಟ್ಟಿ ಅವರು ಹಾಗೂ ಆಡಳಿತ ಮಂಡಳಿ ಸದಸ್ಯರು ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related Articles

Back to top button
error: Content is protected !!